ಇನ್ನೂ 2 ದಿನ ವಾಯುಭಾರ ಕುಸಿತ - ತಮಿಳುನಾಡು, ಕರ್ನಾಟಕ, ಆಂಧ್ರದಲ್ಲಿ ಭಾರೀ ಮಳೆ

ನವದೆಹಲಿ: ಚೆನ್ನೈ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಕಡಿಮೆ ಒತ್ತಡದ ಪ್ರದೇಶದಲ್ಲಿ ಇಂದು ಭಾರೀ ಮಳೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಸೇರಿದಂತೆ ತಮಿಳು ನಾಡಿನ ಹಲವು ಪ್ರದೇಶಗಳು, ಆಂಧ್ರಪ್ರದೇಶದ ಹಲವಾರು ಭಾಗಗಳು ಮತ್ತು ಕರ್ನಾಟಕದ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೆರೆಯ ಕೇರಳ ರಾಜ್ಯದಲ್ಲಿ ಸಹ ಮಳೆಯ ಭಾರೀ ಮುನ್ಸೂಚನೆಯಿದೆ.
ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಮತ್ತು ನಾಗರಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಉಪ ಮಾರ್ಗಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.