ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಗೆ 28,624 ವಿದ್ಯಾರ್ಥಿಗಳು ಹಾಜರು : 345 ಗೈರು
ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಇಂದಿನ ಗಣಿತ ವಿಷಯದ ಪರೀಕ್ಷೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ 28,624 ವಿದ್ಯಾರ್ಥಿಗಳು ಹಾಜರಾಗಿದ್ದರು ಮತ್ತು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ 345 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ 7 ತಾಲೂಕುಗಳ 101 ಪರೀಕ್ಷಾ ಕೇಂದ್ರಗಳಲ್ಲಿ ನಿಯಮಾನುಸಾರ ಪರೀಕ್ಷೆ ನಡೆದಿವೆ. ಜಾಗೃತ ದಳದ ಅಧಿಕಾರಿಗಳು ನಕಲು ತಡೆಯಲು ಉತ್ತಮ ತಪಾಸಣೆ ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.