7 ನೇ ವೇತನ ಆಯೋಗ, ಮಧ್ಯಂತರ ವರದಿ ಪಡೆದು ಅನುಷ್ಠಾನ: ಬಸವರಾಜ ಬೊಮ್ಮಾಯಿ ಭರವಸೆ

7 ನೇ ವೇತನ ಆಯೋಗ, ಮಧ್ಯಂತರ ವರದಿ ಪಡೆದು ಅನುಷ್ಠಾನ: ಬಸವರಾಜ ಬೊಮ್ಮಾಯಿ ಭರವಸೆ

ಹುಬ್ಬಳ್ಳಿ7 ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು. ಬಜೆಟ್ ನಲ್ಲಿ ಅದಕ್ಕಾಗಿ ಹಣವನ್ನೂ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಮಂಗಳವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ ಮಾಡಬೇಕೆಂಬ ಸರ್ಕಾರಿ ನೌಕರರ ಬೇಡಿಕೆಯನ್ನು ಸರ್ಕಾರ ಒಪ್ಪಿದೆ. ನಾವು ಕೂಡಲೇ 7 ನೇ ಆಯೋಗಕ್ಕೆ ಸೂಚನೆ ನೀಡಿ ಮಧ್ಯಂತರ ವರದಿ ಪಡೆದು ಅದರ ಅನುಷ್ಠಾನಕ್ಕೆ ಸಿದ್ಧರಿದ್ದೇವೆ ಎಂದು ತಿಳಿಸಿದರು. ಸಿ..ಆರ್ ಸಿಬ್ಬಂದಿ ಬಲ ಪಡಿಸುವ ಬಗ್ಗೆ ಡಿ.ಜಿ ಅವರಿಗೆ ಸೂಚನೆ ನೀಡಲಾಗಿದೆ ಎಂದರು.