ರಾಷ್ಟ್ರೀಯ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಅಜಿತ್ ಅಗರ್ಕರ್ ಆಯ್ಕೆ
ಮುಂಬೈ : ಟೀಮ್ ಇಂಡಿಯಾ ಮಾಜಿ ಆಲ್ರೌಂಡರ್ ಹಾಗೂ 2007ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಗೆದ್ದ ತಂಡದ ಸದಸ್ಯರಾಗಿದ್ದ ಅಜಿತ್ ಅಗರ್ಕರ್ ರಾಷ್ಟ್ರೀಯ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ನೇಮಕವಾಗಿದ್ದಾರೆ.ಮಂಗಳವಾರ ಬಿಸಿಸಿಐ ಈ ಕುರಿತಾಗಿ ಅಧಿಕೃತವಾಗಿ ಪ್ರಕಟಣೆ ನೀಡಿದೆ.
ಈ ಹಿಂದೆ ಸಮಿತಿಯ ಅಧ್ಯಕ್ಷರಾಗಿದ್ದ ಚೇತನ್ ಶರ್ಮ್, ಕಳೆದ ಫೆಬ್ರವರಿಯಲ್ಲಿ ನಡೆದ ಸ್ಟಿಂಗ್ ಆಪರೇಷನ್ ಬೆನ್ನಲ್ಲಿಯೇ ತಮ್ಮ ಸ್ಥಾನ ಕಳೆದುಕೊಂಡಿದ್ದರು. ಅಲ್ಲಿಂದ ಈ ಹುದ್ದೆ ಖಾಲಿಯಾಗಿ ಉಳಿದಿತ್ತು.