ಬೆಂಗಳೂರು - 25 ಸಾವಿರ ಮಕ್ಕಳಿಗೆ ಉಚಿತ ಸಿಇಟಿ ಮತ್ತು ನೀಟ್ ತರಬೇತಿ
ಬೆಂಗಳೂರು: ಕಲಿಕೆ ಮರು ಸಿಂಚನ ಎಂಬ ಕಾರ್ಯಕ್ರಮ 93 ತಾಲೂಕುಗಳಲ್ಲಿ, 8 ಲಕ್ಷ ಮಕ್ಕಳಿಗೆ ಸಹಾಯ ಆಗಲೆಂದು ಮಾಡಲಿದ್ದೇವೆ. ನೀಟ್ ಗೆ ಮಕ್ಕಳು 2 - 3 ಲಕ್ಷ ಹಣ ಕೊಟ್ಟು ಕ್ಲಾಸ್ ಅಟೆಂಡ್ ಮಾಡುತ್ತಿದ್ದಾರೆ. ಈಗಾಗಿ 25 ಸಾವಿರ ಮಕ್ಕಳಿಗೆ ಮುಂದಿನ ವರ್ಷದಿಂದ ಸಿಇಟಿ ಮತ್ತು ನೀಟ್ ತರಬೇತಿ ನೀಡಲಾಗುತ್ತದೆ. 12 ಕೋಟಿ 50 ಲಕ್ಷ ವೆಚ್ಚದಲ್ಲಿ ಈ ಕಾರ್ಯಕ್ರಮ ನೀಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಇಂದು , ಬೆಂಗಳೂರಿನ ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿ ಆಯೋಜಿಸಿದ ಅವರು, ಕಾಂಗ್ರೆಸ್ ಸರ್ಕಾರ ಒಂದು ವರ್ಷದ ಅವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಏನೆಲ್ಲಾ ಬದಲಾವಣೆ ಮಾಡಿದೆ ಎಂದು ಮಾಹಿತಿ ನೀಡಿದರು. ಹಾಗೂ ಸಿಇಟಿ ಮತ್ತು ನೀಟ್ ತರಬೇತಿಗೆ ವಿಶೇಷ ಸೌಲಭ್ಯ ನೀಡಿದ್ದು, ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದು ಹೇಳಿದರು.