ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ‘ಭರ್ತೃಹರಿ ಮಹತಾಬ್’ ನೇಮಕ

ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ‘ಭರ್ತೃಹರಿ ಮಹತಾಬ್’ ನೇಮಕ

ನವದೆಹಲಿ: ಒಡಿಶಾ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ಮಾಹಿತಿ ನೀಡಿದ್ದಾರೆ. 

ಈ ಸಂಬಂಧ ಎಕ್ಸ್‌ ಮಾಡಿರುವ ಸಚಿವರು, ಸಂವಿಧಾನದ ಪರಿಚ್ಛೇದ 95(1)ರ ಅಡಿಯಲ್ಲಿ ಲೋಕಸಭಾ ಸದಸ್ಯರಾದ ಭರ್ತೃಹರಿ ಮಹತಾಬ್ ಅವರನ್ನು ಸ್ಪೀಕರ್ ಆಗಿ ನೇಮಿಸಲು ರಾಷ್ಟ್ರಪತಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಆಯ್ಕೆಯಾಗುವವರೆಗೆ ಸ್ಪೀಕರ್ ಕರ್ತವ್ಯವನ್ನು ನಿರ್ವಹಿಸಲು ರಾಷ್ಟ್ರಪತಿಗಳು ಸಂತೋಷಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.