ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಬಲಿಯಾದವರ ಪಾರ್ಥಿವ ಶರೀರ ನಾಳೆ ಬೆಳಗ್ಗೆ 3.45ಕ್ಕೆ ಬೆಂಗಳೂರಿಗೆ
ಬೆಂಗಳೂರು : ಪಹಲ್ಗಾಮ್ ದಾಳಿಯಲ್ಲಿ ಹುತಾತ್ಮರಾಗಿರುವ ಪಾರ್ಥಿವ ಶರೀರವನ್ನ ವಿಶೇಷ ವಿಮಾನದಲ್ಲಿ ರಾಜ್ಯಕ್ಕೆ ತರುವ ವ್ಯವಸ್ಥೆಯಾಗಿದೆ.
ಶ್ರೀನಗರದಿಂದ ದೆಹಲಿ ತಲುಪಿ, ಅಲ್ಲಿಂದ ಬೆಂಗಳೂರಿಗೆ ನಾಳೆ ಬೆಳಿಗ್ಗೆ 3.45ಕ್ಕೆ ತಲುಪಲಿದೆ ಎಂಬ ಮಾಹಿತಿ ಸಿಕ್ಕಿದೆ.
ಪಹಲ್ಗಾಮ್ ದಾಳಿಯಲ್ಲಿ ಹುತಾತ್ಮರಾಗಿರುವ, ಸಂಕಷ್ಟಕ್ಕೆ ಈಡಾಗಿರುವ ಕುಟುಂಬಗಳ ಸದಸ್ಯರೊಂದಿಗೆ ಸಂಸದ ತೇಜಸ್ವಿ ಸೂರ್ಯ, ಸಚಿವ ಸಂತೋಷ್ ಲಾಡ್ ಮತ್ತು ಅಧಿಕಾರಿಗಳ ತಂಡ ಸಹ ವಿಶೇಷ ವಿಮಾನದಲ್ಲಿ ಬರಲಿದ್ದಾದೆ. ಇದೇ ವಿಶೇಷ ವಿಮಾನ ನಿಲ್ದಾಣದಲ್ಲಿ ಒಟ್ಟು 13 ಜನ ಕುಟುಂಬ ಸದಸ್ಯರು ಬೆಂಗಳೂರಿಗೆ ವಾಪಸ್ ಬರುತ್ತಿದ್ದಾರೆ.