ಧಾರವಾಡ: ಗೂಳಿಗೆ ಡಿಕ್ಕಿ ಹೊಡೆದು ರಸ್ತೆಯಲ್ಲೇ ಬುಡಮೇಲಾದ ಕಾರು

ಧಾರವಾಡ: ವೇಗವಾಗಿ ಬರುತ್ತಿದ್ದ ಕಾರು ಗೂಳಿಗೆ ಡಿಕ್ಕಿ ಹೊಡೆದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ಧಾರವಾಡದ ಜೆಎಸ್ಎಸ್ ಕಾಲೇಜು ಬಳಿ ಇರುವ ಗಾಂಧಿನಗರ ಕ್ರಾಸ್ ಬಳಿ ನಡೆದಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಗೂಳಿ ಸ್ಥಳದಲ್ಲೇ ಸಾವನ್ನಪ್ಪಿದೆ. ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಕಾರು ಗೂಳಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿದ್ದರು.