ಚಿನ್ನಸ್ವಾಮಿಯಲ್ಲಿ ಐಪಿಎಲ್ ಗೆ ಗ್ರೀನ್ ಸಿಗ್ನಲ್ - ಆರ್‌ಸಿಬಿ ಅಭಿಮಾನಿಗಳಿಗೆ ಡಬಲ್ ಧಮಾಕ!
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದು ಆರ್‌ಸಿಬಿ ಅಭಿಮಾನಿಗಳಿಗೆ ಬಹುನಿರೀಕ್ಷಿತ ಭರ್ಜರಿ ಸಿಹಿ ಸುದ್ದಿ ಎನ್ನಬಹುದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಅನುಮೋದನೆ ನೀಡಲಾಗಿದೆ.