Breaking News: ಸರ್ಕಾರಿ ನೌಕರರಿಗೆ ಸಿಎಂ ಬಿಗ್ ಗಿಫ್ಟ್ - ಅಧಿಕೃತ ಆದೇಶದ ಬಳಿಕ ತೀರ್ಮಾನ ನೌಕರರ ಸಂಘದ ಅಧ್ಯಕ್ಷ
7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಮುಷ್ಕರ ಹಿನ್ನೆಲೆಯಲ್ಲಿ ಆಸ್ಪತ್ರೆ ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ. ಇದರಿಂದ ರಾಜ್ಯಾದ್ಯಂತ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇನ್ನು, ಈ ಕುರಿತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಹಾಗೂ ಪ್ರಮುಖ ಮುಖಂಡರೊಂದಿಗೆ ಚರ್ಚೆ ನಡೆಸಿದ ಸಿಎಂ ಭರ್ಜರಿ ಗಿಫ್ಟ್ ನೀಡಿದ್ದಾರೆ.
ಮಧ್ಯಂತರ ಪರಿಹಾರ ವೇತನವನ್ನು ಸಿಎಂ ಘೋಷಣೆ ಮಾಡಿದ್ದಾರೆ. ಸರ್ಕಾರಿ ನೌಕರರಿಗೆ ಶೇಕಡಾ 17 ರಷ್ಟು ವೇತನ ಹೆಚ್ಚಳ ಮಾಡೋದಾಗಿ ಸಿಎಂ ತಿಳಿಸಿದ್ದು, ರಾಜ್ಯ ಸರ್ಕಾರದಿಂದ ಘೋಷಣೆ ಮಾಡಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಮಧ್ಯಂತರ ಆದೇಶ ಹೊರಡಿಸಲು ಸಿದ್ಧತೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ, ಸರ್ಕಾರಿ ನೌಕರರು ಮುಷ್ಕರ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ.
ಇನ್ನು, ಶೀಘ್ರವೇ ವೇತನ ಹೆಚ್ಚಳ ಮಾಡುತ್ತೇವೆ ಎಂದಿದ್ದಾರೆ. ಆದೇಶ ಆಗೋವವರೆಗೂ ಪ್ರತಿಭಟನೆ ಹಿಂಪಡೆಯಲ್ಲ. ಅಧಿಕೃತ ಆದೇಶದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಹೇಳಿದ್ದಾರೆ.