ಧಾರವಾಡ: ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಕ್ಕೆ ಸಿಎಂ ಬೊಮ್ಮಾಯಿ ಚಾಲನೆ
ಧಾರವಾಡ: ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಉತ್ಪಾದನೆಗೆ ಪ್ರಮುಖವೆನಿಸಿರುವ ಮಣ್ಣು ಮತ್ತು ನೀರಿನ ಪರೀಕ್ಷೆ, ಕೀಟ ಮತ್ತು ರೋಗಗಳನ್ನು ಪತ್ತೆ ಹಚ್ಚುವಿಕೆ, ರೋಗ ನಿಯಂತ್ರಣಾ ಕ್ರಮಗಳ ಕುರಿತು ಜಾಗೃತಿ ಹಾಗೂ ಚಿಕಿತ್ಸೆ ನೀಡುವ 64 ಕೃಷಿ ಸಂಜೀವಿನಿ ವಾಹನಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು.
ಧಾರವಾಡದಲ್ಲಿ ಹಮ್ಮಿಕೊಂಡಿರುವ ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಅವರು 11.52 ಕೋಟಿ ಮೊತ್ತದ 64 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳನ್ನು ಅವರು ಲೋಕಾರ್ಪಣೆಗೊಳಿಸಿದರು.
ಸಿಎಂ ಬೊಮ್ಮಾಯಿ ಅವರಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಅರವಿಂದ ಬೆಲ್ಲದ, ಸಿದ್ದು ಸವದಿ, ಅಮೃತ ದೇಸಾಯಿ, ತವನಪ್ಪ ಅಷ್ಟಗಿ ಸೇರಿದಂತೆ ಇತರರು ಸಾಥ್ ನೀಡಿದರು.