ಫೆ.14ರಿಂದ ಶಾಲೆ ಆರಂಭ: ಸಿಎಂ ಬೊಮ್ಮಾಯಿ ಘೋಷಣೆ

ಫೆ.14ರಿಂದ ಶಾಲೆ ಆರಂಭ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಸೋಮವಾರದಿಂದ 10ನೇ ತರಗತಿವರೆಗಿನಸ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರು, 'ಹೈಕೋರ್ಟ್​ ಸೂಚಿಸಿದ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ 10ನೇ ತರಗತಿವರೆಗೆ ಶಾಲೆ ಆರಂಭಿಸಲಾಗುವುದು. ಫೆಬ್ರವರಿ 14 (ಸೋಮವಾರ)ದ ನಂತರ ಕಾಲೇಜುಗಳು ಶುರುವಾಗಲಿವೆ. ನಾಳೆ ಸಂಜೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿ ಆಯಾ ಜಿಲ್ಲೆಯ ಪರಿಸ್ಥಿತಿಗೆ ಅನುಗುಣವಾಗಿ ಶಾಲಾ- ಕಾಲೇಜು ಆರಂಭಿಸಲಾಗುವುದು' ಎಂದು ತಿಳಿಸಿದ್ದಾರೆ.