ಅಂಬೇಡ್ಕರ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ, ಗೌರವ ಸಮರ್ಪಣೆ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆ ಅಂಗವಾಗಿ ಭಾನುವಾರ ವಿಧಾನಸೌಧದಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಉಪಸ್ಥಿತರಿದ್ದರು.