ಕಾಂಗ್ರೆಸ್ ಲೋಕಸಭೆ ಚುನಾವಣೆ ಪ್ರಚಾರ ಸಮಿತಿ ರಚನೆ : ಅಧ್ಯಕ್ಷ, ಸಹ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ

ಬೆಂಗಳೂರು : ಪ್ರಸಕ್ತ ಲೋಕಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷವು ಇಂದು ಹೊಸದಾಗಿ ಚುನಾವಣಾ ಪ್ರಚಾರ ಸಮಿತಿಯೊಂದನ್ನು ರಚಿಸಿದ್ದು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ.ಎಲ್.ಹನುಮಂತಯ್ಯ ಅವರು ಸಹ ಅಧ್ಯಕ್ಷ ಮತ್ತು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರು ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಇನ್ನುಳಿದಂತೆ ತನ್ವೀರ್ ಸೇಠ್, ಜಿಸಿ.ಚಂದ್ರಶೇಖರ್, ವಿನಯ್ ಕುಲ್ಕರ್ಣಿ, ಮಂಜುನಾಥ್ ಭಂಡಾರಿ, ವಸಂತಕುಮಾರ್ ಸೇರಿದಂತೆ ಆರು ಮಂದಿ ಶಾಸಕರು-ಸಂಸದರು ಕೆಪಿಸಿಸಿ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.