ಹುಬ್ಬಳ್ಳಿ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕರಿಗೂ ಅಂಟಿದ ಕೋವಿಡ್ ಹೆಮ್ಮಾರಿ

ಹುಬ್ಬಳ್ಳಿ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕರಿಗೂ ಅಂಟಿದ ಕೋವಿಡ್ ಹೆಮ್ಮಾರಿ

ಪ್ರತ್ಯಕ್ಷ ನಾಡು ವಾರ್ತೆ:  ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಹೆಮ್ಮಾರಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಆವರಿಸಿಕೊಳ್ಳುತ್ತಿದೆ. ಇಂದು ಹು-ಧಾ ಪೂರ್ವ ಕ್ಷೇತ್ರದ ಕಾಂಗ್ರೆಸ್ ಶಾಸಕರಿಗೂ ಕೊರೊನಾ ಸೋಂಕು ತಗುಲಿದ್ದು ಮೂಲಗಳಿಂದ ತಿಳಿದು ಬಂದಿದೆ.
ನಿನ್ನೆ ಕೆಮ್ಮು, ನಗಡಿ ಕಾಣಿಸಿಕೊಂಡಿದ್ದರಿಂದ ಗುರುವಾರ ಕಿಮ್ಸ್ ಗೆ ದಾಖಲಾಗಿದ್ದರು. ನಿನ್ನೆಯೇ ಶಾಸಕರ ಗಂಟಲ ದ್ರವ ಪರೀಕ್ಷೆ ಮಾಡಲಾಗಿತ್ತು. ಇವತ್ತು ವರದಿ ಕೈ ಸೇರಿದ್ದು ಸೋಂಕು ಇರುವದು ದೃಢಪಟ್ಟಿದ್ದು, ಸೋಂಕಿತ ಶಾಸಕರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. 
ಶಾಸಕರಿಗೆ ಸೋಂಕು ದೃಢಪಟ್ಟಿದ್ದರಿಂದ ಅವರ ಕುಟುಂಬ ಸದಸ್ಯರು, ಕಾರು ಡ್ರೈವರ್, ಗನ್ ಮ್ಯಾನ್ ಅವರ ಗಂಟಲು ದ್ರವ ಸಂಗ್ರಹ ಮಾಡಲಾಗಿದೆ. ಇನ್ನು ಅವರ ಸಂಪರ್ಕದಲ್ಲಿರುವವರನ್ನು ಕ್ವಾರಂಟೈನ್ ‌ಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದ್ದು,ಇನ್ನೂ ಹೆಚ್ಚಿನ ವಿವರಣೆ ಜಿಲ್ಲಾಡಳಿತದಿಂದ ನಿರೀಕ್ಷಿಸಲಾಗುತ್ತಿದೆ.