257.25 ನಿವ್ವಳ ಲಾಭ ಗಳಿಸಿದ ಕ್ರೆಡಲ್ - ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

257.25 ನಿವ್ವಳ ಲಾಭ ಗಳಿಸಿದ ಕ್ರೆಡಲ್ - ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ "ಕ್ರೆಡಲ್" ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಗಳನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು. 

ಕ್ರೆಡಲ್ 2024-25ನೇ ಸಾಲಿನಲ್ಲಿ 257.25 ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಶೇ. 30ರಷ್ಟು ಡಿವಿಡೆಂಡ್ 77,17,50,000 ರೂ. ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಎಲ್‌ ಕಚೇರಿಯಲ್ಲಿ ಸ್ವೀಕರಿಸಿದರು. 

ಇದೇ ವೇಳೆ, ಕ್ರೆಡಲ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವರು ಹಸ್ತಾಂತರಿಸಿದರು. 

ಈ ಸಂದರ್ಭದಲ್ಲಿ ಕ್ರೆಡಲ್ ಅಧ್ಯಕ್ಷರೂ ಆಗಿರುವ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.