ಬ್ರೇಕಿಂಗ್ : ಜುಲೈ 4 ರವರೆಗೆ ದರ್ಶನ್ ಜೈಲು ಪಾಲು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಕೋರ್ಟ್‌ಗೆ ದರ್ಶನ್ ಅವರನ್ನು ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಇಂದು ನಟ ದರ್ಶನ್ ಅವರು ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ. ಈ ಹಿಂದೆ ಪತ್ನಿ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ನಡೆಸಿದ್ದ ಕೇಸ್ನಲ್ಲಿ ದರ್ಶನ್ ಜೈಲು ಪಾಲಾಗಿದ್ದರು. ಇಂದು ಕೋರ್ಟ್ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಹಿನ್ನೆಲೆಯಲ್ಲಿ 2ನೇ ಬಾರಿ ಸೆಂಟ್ರಲ್ ಜೈಲು ಸೇರಲಿದ್ದಾರೆ.