ಇರಾನ್ ಅಧ್ಯಕ್ಷ ರೈಸಿ ನಿಧನ ತೀವ್ರ ದುಃಖ, ಆಘಾತ ತಂದಿದೆ - ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, "ತೀವ್ರ ದುಃಖ ಮತ್ತು ಆಘಾತವಾಗಿದೆ" ಎಂದು ಹೇಳಿದ್ದಾರೆ.
"ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ರೈಸಿ ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಅವರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಸಂತಾಪಗಳು... ಭಾರತವು ಇರಾನ್‌ನೊಂದಿಗೆ ನಿಂತಿದೆ" ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇರಾನ್‌ನ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಸೇರಿದಂತೆ ಒಂಬತ್ತು ಜನರು ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.