ವಿದ್ಯುತ್ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ : ಸಚಿವರೊಂದಿಗೆ ಹೆಸ್ಕಾಂ ಅಧಿಕಾರಿಗಳ ಸಭೆ

ವಿದ್ಯುತ್ ಸಮಸ್ಯೆಗಳ ಬಗ್ಗೆ ವಿಸ್ತೃತ ಚರ್ಚೆ : ಸಚಿವರೊಂದಿಗೆ ಹೆಸ್ಕಾಂ ಅಧಿಕಾರಿಗಳ ಸಭೆ

ಬೆಳಗಾವಿ : ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಹೆಸ್ಕಾಂ ವ್ಯಾಪ್ತಿಯ ಎಲ್ಲ ಜಿಲ್ಲಾ ಶಾಸಕರು ಮತ್ತು ಅಧಿಕಾರಿಗಳ ಮಹತ್ವದ ಸಭೆ ನಡೆಯಿತು. ಹೆಸ್ಕಾಂ ವ್ಯಾಪ್ತಿಯಲ್ಲಿ ಇರುವ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ಬಗೆಯ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಸಂತೋಷ್ ಲಾಡ್ ಹಾಗೂ ಅಶೋಕ್ ಪಟ್ಟಣ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.