ಧಾರವಾಡದಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮೋದಿ

ಧಾರವಾಡದಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಮೋದಿ

ನವದೆಹಲಿ: ಧಾರವಾಡ ಸಮೀಪದ ಬಾಡ ಗ್ರಾಮದ ಬಳಿ ಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ 9 ಮಂದಿ ದಾರುಣವಾಗಿ ಮೃತಪಟ್ಟಿದ್ದರು. ಹಾಗೂ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಮೃತರಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ. 

 

ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಪರಿಹಾರ ಘೋಷಿಸಲಾಗಿದೆ. ಈ ಕುರಿತು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ. ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ದುರ್ಘಟನೆ ತೀವ್ರ ನೋವು ತಂದಿದೆ. ಈ ಅಪಘಾತದಲ್ಲಿ ಪ್ರಾಣಹಾನಿಯಾಗಿರುವುದು ದುಃಖದ ವಿಚಾರ. ದುಃಖಿತ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.