ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಭಾರಿ ಏರಿಕೆ- ಇಂದು 338 ಜನರಿಗೆ ಸೋಂಕು ದೃಢ
ಧಾರವಾಡ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಬ್ಬರ ಹೆಚ್ಚುತ್ತಲೇ ಇದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 338 ಜನರಿಗೆ ಕೊರೊನಾ ಕಾಣಿಸಿಕೊಂಡಿದ್ದು, ಈವರೆಗೂ ಒಟ್ಟು 63,255 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಇಂದು 87 ಮಂದಿ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಈವರೆಗೂ 60,580 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಈವರೆಗೂ ಒಟ್ಟು 1,325 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 1,348 ಸಕ್ರಿಯ ಪ್ರಕರಣಗಳಿವೆ.