ಧಾರವಾಡ: ಎಪ್ರೀಲ್ 21ಕ್ಕೆ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆ..!

ಧಾರವಾಡ: ಎಪ್ರೀಲ್ 21ಕ್ಕೆ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆ..!

ಧಾರವಾಡ: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಎಪ್ರೀಲ್ 21 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಜಿಲ್ಲಾ ಪಂಚಾಯತ ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ. 

ಎಪ್ರೀಲ್ 21 ರಂದು ಜರಗುವ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.