ಕನ್ನಡದ ಹೆಸರಾಂತ ನಿರ್ದೇಶಕ ಎಸ್.ಕೆ. ಭಗವಾನ್ ವಿಧಿವಶ

ಕನ್ನಡದ ಹೆಸರಾಂತ ನಿರ್ದೇಶಕ ಎಸ್.ಕೆ. ಭಗವಾನ್ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ನಿಧನರಾಗಿದ್ದಾರೆ. 

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 89 ವರ್ಷದ ಭಗವಾನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. 

ಭಗವಾನ್ ಅವರು 1966ರಲ್ಲಿ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪ್ರವೇಶಿಸಿದ್ದರು. ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರರಾಗಿ ನಿರ್ದೇಶನ ಪ್ರಾರಂಭಿಸಿದ್ದರು. ಈ ಜೋಡಿ ಸುಮಾರು 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿತ್ತು. ಕಸ್ತೂರಿ ನಿವಾಸ, ಎರಡು ಕನಸು, ಚಂದನದ ಗೊಂಬೆ, ಹೊಸಬೆಳಕು ಸೇರಿದಂತೆ ಹಲವು ಯಶಸ್ವಿ ಚಿತ್ರಗಳನ್ನು ನೀಡಿದೆ.