ಬೆಂಗಳೂರು ಸಮಗ್ರ ಟೌನ್ ಶಿಪ್ ಲಾಂಛನ ಬಿಡುಗಡೆ ಮಾಡಿದ ಡಿಕೆಶಿ

ಬೆಂಗಳೂರು:ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಟೌನ್ ಶಿಪ್ (ಜಿಬಿಐಟಿ ) ಲಾಂಛನ ಬಿಡುಗಡೆ ಮಾಡಿ ಮಾಧ್ಯಮಗೋಷ್ಠಿಯಲ್ಲಿ ಗುರುವಾರ ಮಾತನಾಡಿದರು.
ಬಮೂಲ್ ಅಧ್ಯಕ್ಷ, ನಿಕಟಪೂರ್ವ ಸಂಸದ ಡಿ.ಕೆ ಸುರೇಶ್, ಶಾಸಕರಾದ ಬಾಲಕೃಷ್ಣ, ಇಕ್ಬಾಲ್ ಹುಸೇನ್, ಎಂಎಲ್‌ಸಿ ಎಸ್ ರವಿ, ಜಿಬಿಐಟಿ ಅಧ್ಯಕ್ಷ ಗಾಣಕಲ್ ನಟರಾಜ್, ಡಿಸಿಎಂ ಕಾರ್ಯದರ್ಶಿ, ಬಿಎಂಆರ್ಡಿಎ ಹಾಗೂ ಬೆಂಗಳೂರು ಕೇಂದ್ರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್, ರಾಮನಗರ ಜಿಲ್ಲಾಧಿಕಾರಿ ಯಶವಂತ್ ಗುರುಕರ್, ಎಸ್‌ಪಿ ಶ್ರೀನಿವಾಸಗೌಡ ಮತ್ತಿತರರು ಉಪಸ್ಥಿತರಿದ್ದರು