ಹಿರಿಯ ಕವಿ ಡಾ.ಚೆನ್ನವೀರ ಕಣವಿ ಇನ್ನಿಲ್ಲ

ಧಾರವಾಡ: ನಾಡಿನ ಹೆಸರಾಂತ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು ಇನ್ನಷ್ಟೇ ಅಧೀಕೃತ ಮಾಹಿತಿ ನೀಡಬೇಕಿದೆ.