ಲಾಕ್​ಡೌನ್ ಬಗ್ಗೆ ಸ್ಪಷ್ಟನೆ ನೀಡಿದ ಡಾ.ಸುಧಾಕರ್

ಲಾಕ್​ಡೌನ್ ಬಗ್ಗೆ ಸ್ಪಷ್ಟನೆ ನೀಡಿದ ಡಾ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾಗೂ ಒಮಿಕ್ರಾನ್ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್‌ಡೌನ್‌ ನಿರ್ಧಾರಕ್ಕೆ ಬರಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಲಾಕ್‌ಡೌನ್ ವಿಚಾರವನ್ನು ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ತಳ್ಳಿ ಹಾಕಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಲಾಕ್​ಡೌನ್​ ಮೂಲಕ ಕೊರೊನಾ ನಿಯಂತ್ರಿಸುವುದು ಸರಿಯಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್​ಡೌನ್​ ಇಲ್ಲ. ಲಾಕ್​ಡೌನ್​ನಿಂದ ಕೊರೊನಾ ನಿಯಂತ್ರಿಸಲು ಆಗಲ್ಲ. ಒಮಿಕ್ರಾನ್ ತಡೆಗೆ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದ್ದೇವೆ. ಅಧಿಕಾರಿಗಳೊಂದಿಗೆ ನಿತ್ಯವೂ ಸಭೆ ನಡೆಸುತ್ತಿರುವೆ ಎಂದು ತಿಳಿಸಿದ್ದಾರೆ. ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಸಭೆ ಮಾಡಲಾಗುತ್ತಿದೆ. ಒಂದೇ ವಾರದಲ್ಲಿ ಸೋಂಕು ಕಡಿಮೆಯಾಗಲ್ಲ. ಒಮಿಕ್ರಾನ್​ 5-6 ಪಟ್ಟು ವೇಗವಾಗಿ ಹರಡುತ್ತಿದೆ. ಫೆಬ್ರವರಿ ಮೊದಲ ವಾರ ಒಮಿಕ್ರಾನ್ ಹೆಚ್ಚಾಗಬಹುದು. ಫೆಬ್ರವರಿ 3-4ನೇ ವಾರದವರೆಗೆ ಎಚ್ಚರಿಕೆಯಿಂದಿರಬೇಕು ಎಂದು ಹೇಳಿದ್ದಾರೆ.