ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಚುನಾವಣೆ; ಮತ ಎಣಿಕೆ ಆರಂಭ

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನದ ಚುನಾವಣೆ; ಮತ ಎಣಿಕೆ ಆರಂಭ

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಇಂದು ಸುಮಾರು 10.20ಕ್ಕೆ ಆರಂಭವಾಗಿದ್ದು, ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಈ ಮಧ್ಯೆ ಮೂರು ರಾಜ್ಯಗಳ ಮತದಾನದಲ್ಲಿ ಅಕ್ರಮ ನಡೆದಿದೆ ಎಂದು ತರೂರ್ ಬಣ ಆರೋಪಿಸಿರುವುದಾಗಿ ವರದಿಯಾಗಿದೆ. ಉತ್ತರ ಪ್ರದೇಶ, ಪಂಜಾಬ್, ತೆಲಂಗಾಣದಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿ ಬರುತ್ತಿವೆ. 

ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಪ್ರಾಧಿಕಾರ ಅಧ್ಯಕ್ಷ ಮಧುಸೂದನ್ ಮಿಸ್ಟ್ರಿ ಅವರ ಮೇಲ್ನೋಟದಲ್ಲಿ ಮತ ಎಣಿಕೆ ನಡೆಯುತ್ತಿದೆ. ದೇಶದೆಲ್ಲೆಡೆ 68 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು. ಬ್ಯಾಲೆಟ್ ಬಾಕ್ಸ್‌ಗಳನ್ನು ಸ್ಟ್ರಾಂಗ್ ರೂಮ್‌ನಲ್ಲಿ ಭದ್ರವಾಗಿರಿಸಲಾಗಿತ್ತು.