ಕೇಜ್ರಿವಾಲ್‌ಗೆ 8ನೇ ಬಾರಿ ಸಮನ್ಸ್ ನೀಡಿದ ಜಾರಿ ನಿರ್ದೇಶನಾಲಯ

ನವದೆಹಲಿ: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ 8ನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.
ದೆಹಲಿಯ ಆಪಾದಿತ ಮದ್ಯ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ಸಂಸ್ಥೆ ಇ.ಡಿ ಮಾರ್ಚ್ 4ರಂದು ಕೇಜ್ರಿವಾಲ್ ಅವರನ್ನ ವಿಚಾರಣೆಗೆ ಕರೆದಿದೆ. ಇದಕ್ಕೂ ಮುನ್ನ ಕೇಜ್ರಿವಾಲ್‌ಗೆ 7 ಸಮನ್ಸ್‌ಗಳನ್ನು ಕಳುಹಿಸಲಾಗಿದೆ. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಈಗ ಇ.ಡಿ ಅಧಿಕಾರಿಗಳು 8ನೇ ಸಮನ್ಸ್ ಕಳುಹಿಸಿದೆ.
ದೆಹಲಿಯ ಅಬಕಾರಿ ನೀತಿಯಲ್ಲಿ ಹಗರಣದ ಆರೋಪಗಳಿದ್ದು, ಈ ಸಂಬಂಧ ಸಿಬಿಐ ತನಿಖೆ ನಡೆಸುತ್ತಿದೆ. ಅದೇ ಸಮಯದಲ್ಲಿ, ಇ.ಡಿ ಈ ಪ್ರಕರಣವನ್ನ ಅಕ್ರಮ ಹಣ ವರ್ಗಾವಣೆಯ ಕೋನದಿಂದ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಇಬ್ಬರು ಪ್ರಮುಖ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನ ಕೇಂದ್ರ ಏಜೆನ್ಸಿಗಳು ಇಲ್ಲಿಯವರೆಗೆ ಬಂಧಿಸಿವೆ.