ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ ಹಿನ್ನೆಲೆ ಪರಿಕ್ಷಾರ್ಥಿಗಳಿಗೆ KSRTC ಗುಡ್ ನ್ಯೂಸ್ ನೀಡಿದೆ. ಪರೀಕ್ಷೆ ದಿನ KSRTC ಯಲ್ಲಿ ಮಕ್ಕಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಮನೆಯಿಂದ ಪರೀಕ್ಷಾ ಕೇಂದ್ರದ ವರೆಗೆ ಈ ಅವಧಿಯಲ್ಲಿ ಮಕ್ಕಳು ಸಾರಿಗೆ ಬಸ್ ನಲ್ಲಿ ಹಾಲ್ ಟಿಕೆಟ್ ತೋರಿಸುವ ಮೂಲಕ ಉಚಿತವಾಗಿ ಓಡಾಡಲು ಅವಕಾಶ ಕಲ್ಪಿಸಲಾಗಿದೆ.