ಉಡುಪಿ : ಡಿ.23ರಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಕೊಲ್ಲೂರು , ಕುಂದಾಪುರ ಭೇಟಿ

ಉಡುಪಿ : ಡಿ.23ರಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಕೊಲ್ಲೂರು , ಕುಂದಾಪುರ ಭೇಟಿ

ಉಡುಪಿ : ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರು ಡಿ. 23ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. 

ಬೆಳಗ್ಗೆ 7.50 ಕ್ಕೆ ಬೆಂಗಳೂರಿನಿಂದ ವಿಮಾನದಲ್ಲಿ ಹೊರಡಲಿದ್ದು, 9.05 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದ್ದು, 11 ಗಂಟೆಗೆ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ನಡೆಯುವ ಕುಂದಾಪುರ ಎಜುಕೇಶನ್‌ ಸೊಸೈಟಿಯ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆಯಲಿದ್ದಾರೆ. 4.15ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿ ಬೆಂಗಳೂರಿಗೆ ಪಯಣ ಬೆಳೆಸಲಿದ್ದಾರೆ ಎಂದು ಲೋಕಭವನ (ರಾಜಭವನ) ದ ಪ್ರಕಟನೆ ತಿಳಿಸಿದೆ.