IND vs SL T20: ಇಂದಿನಿಂದ ಸರಣಿ ಆರಂಭ

IND vs SL T20: ಇಂದಿನಿಂದ ಸರಣಿ ಆರಂಭ

ಲಕ್ನೋ: ಭಾರತ ಮತ್ತು ಶ್ರೀಲಂಕಾ ನಡುವಿನ 3 ಪಂದ್ಯಗಳ ಟಿ-20 ಸರಣಿಯ ಮೊದಲ ಪಂದ್ಯವು ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕದಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆಯಲಿದೆ. ವೆಸ್ಟ್ ಇಂಡೀಸ್​ ವಿರುದ್ಧ ಏಕದಿನ ಹಾಗೂ ಟಿ-20 ಸರಣಿಗಳನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ಟೀಂ ಇಂಡಿಯಾ ಇದೀಗ ಮತ್ತೊಂದು ಭರ್ಜರಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಅತ್ತ ಶ್ರೀಲಂಕಾ ತಂಡವು ಆಸ್ಟ್ರೇಲಿಯಾ ವಿರುದ್ಧ 4-1 ಅಂತರದ ಹೀನಾಯ ಸೋಲಿನೊಂದಿಗೆ ಭಾರತದ ವಿರುದ್ಧದ ಸರಣಿಗೆ ಸಜ್ಜಾಗುತ್ತಿದೆ.