ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತಕ್ಕೆ ಅತಿ ದೊಡ್ಡ ಗೆಲುವು

ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತಕ್ಕೆ ಅತಿ ದೊಡ್ಡ ಗೆಲುವು

ನವದೆಹಲಿ: ದೆಹಲಿಯಲ್ಲಿ ಗುರುವಾರ ನಡೆದ ಟಿ20 ವಿಶ್ವಕಪ್ 2026 ರ ಗ್ರೂಪ್ ಎ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾವನ್ನು 93 ರನ್‌ಗಳ ಭರ್ಜರಿ ಅಂತರದಿಂದ ಸೋಲಿಸಿ ಇತಿಹಾಸ ನಿರ್ಮಿಸಿದೆ. 

ಸತತ 10 ಟಿ20 ವಿಶ್ವಕಪ್ ಪಂದ್ಯಗಳನ್ನು ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ರನ್‌ಗಳ ಅಂತರದಲ್ಲಿ ಇದು ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಅತಿದೊಡ್ಡ ಗೆಲುವಾಗಿದೆ. ಮೊದಲು ಬ್ಯಾಟ್ ಮಾಡಿದ ಭಾರತ 209/9 ರನ್ ಗಳಿಸಿದರೆ, ನಮೀಬಿಯಾ ತಂಡವನ್ನು 18.2 ಓವರ್‌ಗಳಲ್ಲಿ ಕೇವಲ 116 ರನ್‌ಗಳಿಗೆ ಆಲೌಟ್ ಮಾಡಿತು.