IPL 2024 Final : SRH ವಿರುದ್ಧ ಗೆದ್ದು ಮೂರನೇ ಬಾರಿಗೆ ಟ್ರೋಫಿಗೆ ಮುತ್ತಿಕ್ಕಿದ ಕೆಕೆಆರ್

IPL 2024 Final : SRH ವಿರುದ್ಧ ಗೆದ್ದು ಮೂರನೇ ಬಾರಿಗೆ ಟ್ರೋಫಿಗೆ ಮುತ್ತಿಕ್ಕಿದ ಕೆಕೆಆರ್

ಚೆನ್ನೈ: ಅದ್ಭುತ ಬೌಲಿಂಗ್ ಹಾಗೂ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡವು ಸನ್‌ರೈಸರ್ಸ್ ಹೈದರಾಬಾದ್‌ ತಂಡದ ವಿರುದ್ಧ 8 ವಿಕೆಟ್‌ಗಳಿಂದ ಗೆದ್ದು, ಮೂರನೇ ಬಾರಿಗೆ ಟ್ರೋಫಿಗೆ ಮುತ್ತಿಕ್ಕಿದೆ. 

ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್ 2024ರ ಫೈನಲ್‌ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್‌ ತಂಡವು 18.3 ಓವರ್‌ಗಳಲ್ಲಿ 113 ರನ್‌ ಗಳಿಸಿ ಆಲೌಟ್‌ಗೆ ತುತ್ತಾಯಿತು. ತಂಡದ ಪರ ನಾಯಕ ಪ್ಯಾಟ್ ಕಮ್ಮಿನ್ಸ್‌ 24 ರನ್‌ ಹಾಗೂ ಐಡೆನ್ ಮಾರ್ಕ್ರಾಮ್ 20 ರನ್‌ ಗಳಿಸಿದರು. ಉಳಿದಂತೆ ಎಲ್ಲ ಆಟಗಾರರು ಬಹುಬೇಗ ವಿಕೆಟ್‌ ಒಪ್ಪಿಸಿದ್ದರು. 

ಇದಕ್ಕೆ ಉತ್ತರವಾಗಿ ಕೋಲ್ಕತ್ತಾ ತಂಡವು 10.3 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 114 ರನ್‌ ಗಳಿಸಿ ಗೆದ್ದು ಬೀಗಿದೆ. ತಂಡದ ಪರ ವೆಂಕಟೇಶ್ ಅಯ್ಯರ್‌ 26 ಎಸೆತಗಳಲ್ಲಿ 52* ರನ್‌, ರಹಮಾನುಲ್ಲಾ ಗುರ್ಬಾಜ್ 32 ಎಸೆತಗಳಲ್ಲಿ 39 ರನ್ ಗಳಿಸಿದರು. 

ಇದಕ್ಕೂ ಮುನ್ನ ಕೋಲ್ಕತ್ತಾ ಪರ ಆಂಡ್ರೆ ರಸೆಲ್ 3 ವಿಕೆಟ್‌ ಉರುಳಿಸಿ ಮಿಂಚಿದರೆ, ಮಿಚೆಲ್ ಸ್ಟಾರ್ಕ್ ಹಾಗೂ ಹರ್ಷಿತ್ ರಾಣಾ ತಲಾ 2 ವಿಕೆಟ್‌, ವೈಭವ್ ಅರೋರಾ, ಸುನಿಲ್ ನರೈನ್ ಹಾಗೂ ವರುಣ್ ಚಕ್ರವರ್ತಿ ತಲಾ 1 ವಿಕೆಟ್‌ ಪಡೆದುಕೊಂಡು ತಂಡಕ್ಕೆ ಕೊಡುಗೆ ನೀಡಿದ್ದರು. 

2012 ಮತ್ತು 2014 ರಲ್ಲಿ ಗೌತಮ್ ಗಂಭೀರ್ ಅಡಿಯಲ್ಲಿ ಪ್ರಶಸ್ತಿಗಳನ್ನು ಗೆದ್ದುಕೊಂಡಿತ್ತು.