ಇರಾನ್-ಇಸ್ರೇಲ್ ಸಂಘರ್ಷದ ಬಿಸಿ: ವಿಮಾನ ಹಾರಾಟಕ್ಕೆ ಬ್ರೇಕ್, ಪ್ರಯಾಣಿಕರಿಗೆ ಆತಂಕ!
ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ವಿಶೇಷವಾಗಿ ಮಧ್ಯಪ್ರಾಚ್ಯದ ಹಲವು ಪ್ರದೇಶಗಳಿಗೆ ತೆರಳುವ ವಿಮಾನಗಳ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಒಟ್ಟು 19 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ಇವುಗಳಲ್ಲಿ 9 ಆಗಮನ ಮತ್ತು 10 ನಿರ್ಗಮನ ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಬೆಂಗಳೂರಿನ ವಿಮಾನಗಳ ಮೇಲೂ ಪರಿಣಾಮ
ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೊರಡಬೇಕಿದ್ದ ಹಲವು ವಿಮಾನಗಳ ವೇಳಾಪಟ್ಟಿಯಲ್ಲಿಯೂ ಬದಲಾವಣೆಯಾಗಿದೆ. ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮುನ್ನ ತಮ್ಮ ಏರ್‌ಲೈನ್ಸ್ ಸಂಸ್ಥೆಗಳೊಂದಿಗೆ ಸಂಪರ್ಕಿಸಿ, ವಿಮಾನದ ಸ್ಥಿತಿಗತಿಯ ಬಗ್ಗೆ ದೃಢಪಡಿಸಿಕೊಂಡು ಆಗಮಿಸುವಂತೆ ಸೂಚಿಸಲಾಗಿದೆ.