BREAKING: ನಾಳೆ ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಜನಾರ್ದನ ರೆಡ್ಡಿ

ಬಳ್ಳಾರಿ: ಬಿಜೆಪಿ ತೊರೆದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದ ಗಾಲಿ ಜನಾರ್ಧನ ರೆಡ್ಡಿ ಮರಳಿ ಗೂಡಿಗೆ ಎಂಬಂತೆ ನಾಳೆ ಬಿಜೆಪಿ ಸೇರ್ಪಡೆ ಆಗಲಿದ್ದಾರೆ. ನಾಳೆ (ಮಾರ್ಚ್ 25) ಪಕ್ಷದ ವರಿಷ್ಟರು ಜನಾರ್ದನ ರೆಡ್ಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ.
ಈ ಬಗ್ಗೆ ಬೆಂಗಳೂರಿನ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ದನ ರೆಡ್ಡಿ, ಬಿಜೆಪಿ ಸೇರುವ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.