70 ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

70 ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು: 70 ವರ್ಷದ ಕನ್ನಡ ರಾಜ್ಯೋತ್ಸವದ ಹಿನ್ನೆಲೆ 70 ಮಂದಿ ಸಾಧಕರಿಗೆ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಸಕ್ತ ಸಾಲಿನ 70 ಮಂದಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸನ್ಮಾನಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಶಿವರಾಜ್ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ವೆಂಕಟೇಶ್, ನಿರ್ದೇಶಕಿ ಗಾಯತ್ರಿ ಮತ್ತಿತರರು ಉಪಸ್ಥಿತರಿದ್ದರು.