ಕರ್ನಾಟಕಕ್ಕೆ ಮತ್ತೆ ಅಕಾಲಿಕ ಮಳೆ ಆತಂಕ- ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ ಸಾಧ್ಯತೆ

ಕರ್ನಾಟಕಕ್ಕೆ ಮತ್ತೆ ಅಕಾಲಿಕ ಮಳೆ ಆತಂಕ- ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ ಸಾಧ್ಯತೆ

ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಡಿಸೆಂಬರ್ 27 ಮತ್ತು 28ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರಿನಲ್ಲಿ ಭಾನುವಾರ ಕೂಡ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ಕೆಲವೆಡೆ ಸಂಜೆಯ ವೇಳೆಗೆ ತುಂತುರು ಮಳೆಯೂ ಸುರಿದಿತ್ತು. ಇಂದು ಕೂಡ ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.