ಕೊನೆಗೂ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ಗೆ ಒಲಿದ ಕೆಎಂಎಫ್ ಅಧ್ಯಕ್ಷ ಪಟ್ಟ

ಬೆಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಅಧ್ಯಕ್ಷ ಹುದ್ದೆ ಕೊನೆಗೂ ಹಗರಿಬೊಮ್ಮನಹಳ್ಳಿಯ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ಗೆ ಒಲಿದಿದೆ.
ಕೆಎಂಎಫ್ ಅಧ್ಯಕ್ಷರಾಗಿ ಭೀಮಾ ನಾಯ್ಕ್ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಾಲಚಂದ್ರ ಜಾರಕಿಹೊಳಿ ಅವರ ಕೆಎಂಎಫ್ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಹೀಗಾಗಿ ಚುನಾವಣೆ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿತ್ತು.
ಆದ್ರೆ, ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಯಾರು ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾದರು.
ಒಟ್ಟು 14 ಒಕ್ಕೂಟದ ಪ್ರತಿನಿಧಿಗಳು, ಪಶುಸಂಗೋಪನಾ ಇಲಾಖೆ ನಿರ್ದೇಶಕ, ಸಹಕಾರ ಇಲಾಖೆ ರಿಜಿಸ್ಟಾರ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಒಬ್ಬರು ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 18 ಮಂದಿ ಮತದಾನ ಹೊಂದಿದ್ದರು.
ಆದ್ರೆ, ಭೀಮಾ ನಾಯ್ಕ್ಗೆ ಎದುರಾಳಿಯಾಗಿ ಯಾರೂ ನಾಮಪತ್ರ ಸಲ್ಲಿಸಿಲ್ಲ. ಇದರಿಂದ ಮತದಾನ ನಡೆಯದೇ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.