ಭಾಷಣ ಮಾಡುತ್ತಲೇ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ: ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿ, ಖರ್ಗೆ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ದೂರ ವಾಣಿ ಕರೆ ಮಾಡಿ ಮೋದಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಚುನಾವಣಾ ಪ್ರಚಾರ ಸಭೆಯಲ್ಲಿ ಭಾನುವಾರ ಮಾತನಾಡುವ ಖರ್ಗೆ ಅವರು ಅಸ್ವಸ್ಥರಾದರು. ತಕ್ಷಣ ಸುತ್ತುವರಿದ ಪಕ್ಷದ ಮುಖಂಡರು ಅವರನ್ನು ಕುರ್ಚಯಲ್ಲಿ ಕೂರಿಸಿದರು. ಕೆಲ ನಿಮಿಷಗಳ ನಂತರ, ಮತ್ತೆ ವೇದಿಕೆಗೆ ಬಂದ ಖರ್ಗೆ ಅವರು ಮೋದಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದರು.