ರಾಜ್ಯದ 4 ರೈಲು ನಿಲ್ದಾಣಗಳಿಗೆ ಸಂತರ ಹೆಸರು: ಎಂ.ಬಿ ಪಾಟೀಲ್ ಶಿಫಾರಸು
ಬೆಂಗಳೂರು : ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ & ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಅವರು ಶಿಫಾರಸು ಮಾಡಿದ್ದು, ಈ ಸಂಬಂಧ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಶ್ರೀ ಬಸವ ಮಹಾಸ್ವಾಮೀಜಿ, ಚನ್ನಬಸವ ಪಟ್ಟದ್ದೇವರು & ಭಾಯಗಡ ರೈಲು ನಿಲ್ದಾಣ ಎಂದು ಹೊಸ ಹೆಸರುಗಳನ್ನು ಇಡಲು ಪ್ರಸ್ತಾಪಿಸಿದ್ದಾರೆ.