ಮುಂಗಾರು ಪ್ರಬಲ: ಭಾರಿ ಮಳೆ ಸಾಧ್ಯತೆಯ ಹಿನ್ನೆಲೆ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ಪ್ರಬಲವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಮುಂದಿನ ನಾಲ್ಕು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನಗಳಿಂದ ಬಹುತೇಕ ಕಡೆ ಮಳೆಯಾದ ವರದಿಯಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಹಾಸನ, ಕೊಡಗು, ಮೈಸೂರು, ರಾಮನಗರ, ಮಂಡ್ಯ, ಕೋಲಾರ, ತುಮಕೂರಿನಲ್ಲಿ ಆಗಸ್ಟ್ 5 ರಿಂದ 8 ರವರೆಗೆ ಭಾರೀ ಆಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.