ಬ್ರೇಕಿಂಗ್ : ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ವಿದಾಯ

ಬ್ರೇಕಿಂಗ್ : ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ವಿದಾಯ

ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್‌ ಸಿಗದ ಕಾರಣಕ್ಕೆ ಬೇಸರಗೊಂಡಿದ್ದ ಬಿಜೆಪಿ ಸಂಸದ ಸಂಗಣ್ಣ ಕರಡಿ ಸಂಸದ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ ಸಂಜೆ ರಾಜೀನಾಮೆ ಕೊಟ್ಟಿದ್ದಾರೆ. 

 

‘ಲೋಕಸಭೆ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರಿಗೆ ಈ ಮೇಲ್‌ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದ್ದೇನೆ’ ಎಂದು ಸಂಗಣ್ಣ ಕರಡಿ ತಿಳಿಸಿದ್ದಾರೆ. 

ಹಿಂದಿನ ಎರಡು ಅವಧಿಗೆ ಸತತವಾಗಿ ಸಂಸದರಾಗಿದ್ದ ಅವರು ಟಿಕೆಟ್ ಸಿಗದ ಕಾರಣಕ್ಕೆ ಅಸಮಾಧಾನಗೊಂಡಿದ್ದರಲ್ಲದೇ, ಪಕ್ಷದ ರಾಜ್ಯ ನಾಯಕರ ವಿರುದ್ಧ ಆಕ್ರೋಶಗೊಂಡಿದ್ದರು. ಅವರನ್ನು ಬಿ.ಎಸ್‌. ಯಡಿಯೂರಪ್ಪ, ಪ್ರಲ್ಹಾದ ಜೋಶಿ, ಬಸವರಾಜ ಬೊಮ್ಮಾಯಿ, ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಬೆಂಗಳೂರಿಗೆ ಕರೆಯಿಸಿ ಸಮಾಧಾನಪಡಿಸಿ ಪಕ್ಷ ಘೋಷಿಸಿದ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್‌ ಪರ ಪ್ರಚಾರ ಮಾಡುವಂತೆ ಹೇಳಿದ್ದರು.