BREAKING: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಗುಂಡಿಕ್ಕಿ ಕೊಲೆ

ಮುಂಬೈ: ಎನ್‌ಸಿಪಿ ಹಿರಿಯ ನಾಯಕ ಹಾಗೂ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಬಣದ ಬಾಬಾ ಸಿದ್ದಿಕಿ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.
ಮುಂಬೈನ ಬಾಂದ್ರಾ ಈಸ್ಟ್‌ನಲ್ಲಿ ರಾತ್ರಿ 9-15ರ ವೇಳೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಬಾಬಾ ಸಿದ್ದಿಕಿ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಿದ್ದಿಕಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಸಿದ್ದಕಿ ಮೃತಪಟ್ಟಿದ್ದಾರೆ.