ಸಿಎಂ, ಡಿಸಿಎಂ, ಗೃಹ ಸಚಿವರನ್ನ ಭೇಟಿಯಾದ ನೂತನ ಬೆಂಗಳೂರು ನಗರ ಕಮಿಷನರ್ ಸೀಮಂತ್ ಕುಮಾರ್ ಸಿಂಗ್

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ ಕ್ಕೆ 11 ಜನರು ಸಾವನ್ನಪ್ಪಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಪೊಲೀಸ್ ಅಧಿಕಾರಿಗಳನ್ನ ತಲೆದಂಡ ಮಾಡಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ದಯಾನಂದ್ ಅವರ ಜಾಗಕ್ಕೆ ನೂತನ ಕಮೀಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಿಸಲಾಗಿದೆ.
ಸೀಮಂತ್ ಕುಮಾರ್ ಸಿಂಗ್ ನಿನ್ನೆ ರಾತ್ರಿಯೇ ಬೆಂಗಳೂರು ಕಮಿಷನರ್ ಆಗಿ ಚಾರ್ಜ್ ತಗೆದುಕೊಂಡು ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೀಮಂತ್ ಕುಮಾರ್ ಸಿಂಗ್ ಭೇಟಿಯಾದರು.
ಈ ಸಂದರ್ಭದಲ್ಲಿ ನೂತನ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಅವರನ್ನ ಸಿಎಂ ಸಿದ್ದರಾಮಯ್ಯ ಹೂಗುಚ್ಛ ನೀಡಿ ಅಭಿನಂದಿಸಿದರು. ಸಿಎಂ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಗೃಹ ಸಚಿವ ಪರಮೇಶ್ವರ್ ರನ್ನ ಸಹ ಸೀಮಂತ್ ಕುಮಾರ್ ಭೇಟಿಯಾದರು.