ಬಿಹಾರ | ಎನ್‌ಡಿಎ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣ ವಚನ: 11 ವರ್ಷದಲ್ಲಿ 9ನೇ ಬಾರಿ ಸಿಎಂ

ಬಿಹಾರ | ಎನ್‌ಡಿಎ ಮೈತ್ರಿಕೂಟದ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣ ವಚನ: 11 ವರ್ಷದಲ್ಲಿ 9ನೇ ಬಾರಿ ಸಿಎಂ

ಆರ್‌ಜೆಡಿ ಮಹಾಘಟಬಂಧನ್ ಮೈತ್ರಿಕೂಟಕ್ಕೆ ಇಂದು ಬೆಳಿಗ್ಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದ ಬೆಂಬಲದೊಂದಿಗೆ  ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು. ಕಳೆದ 18 ತಿಂಗಳಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡು ಮತ್ತೆ ಸೇರ್ಪಡೆಯಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಅಲ್ಲದೆ 11 ವರ್ಷಗಳಲ್ಲಿ ಇದು 9ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.