ಅತಿಥಿ ಉಪನ್ಯಾಸಕರಿಗೆ ವೇತನ ಕೊಡಿ - ಡಾ. ಎಂ.ಸಿ ಸುಧಾಕರ್‌ಗೆ ಪತ್ರ ಬರೆದ ಸುರೇಶ್ ಕುಮಾರ್

ಅತಿಥಿ ಉಪನ್ಯಾಸಕರಿಗೆ ವೇತನ ಕೊಡಿ - ಡಾ. ಎಂ.ಸಿ ಸುಧಾಕರ್‌ಗೆ ಪತ್ರ ಬರೆದ ಸುರೇಶ್ ಕುಮಾರ್

ಬೆಂಗಳೂರು: ಕಳೆದ ಎರಡೂವರೆ ತಿಂಗಳಿಂದ ಅತಿಥಿ ಉಪನ್ಯಾಸಕರಿಗೆ ಸಂಬಳ ನೀಡದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರಿಗೆ ಶಾಸಕ ಸುರೇಶ್ ಕುಮಾರ್ ಪತ್ರವನ್ನು ಬರೆದಿದ್ದಾರೆ. 

ಕಳೆದ ಎರಡೂವರೆ ತಿಂಗಳಿಂದ ಅತಿಥಿ ಉಪನ್ಯಾಸಕರಿಗೆ ಸಂಬಳ ನೀಡಿಲ್ಲ. ಇದರಿಂದ ಅತಿಥಿ ಉಪನ್ಯಾಸಕರು ಕಂಗಾಲು ಆಗಿದ್ದಾರೆ. ಎಷ್ಟು ಬಾರಿ ಸರ್ಕಾರದ ಗಮನಕ್ಕೆ ತಂದು ಹೋರಾಟ ಮಾಡಿದರೂ ಕೂಡ ಸರ್ಕಾರ ಮಾತ್ರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಈಗ ಅತಿಥಿ ಉಪನ್ಯಾಸಕರ ಪರ ಶಾಸಕ ಸುರೇಶ್ ಕುಮಾರ್ ಮಾಹಿತಿ ನೀಡುತ್ತಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಅವರಿಗೆ ಪತ್ರ ಕೂಡ ಬರೆದಿದ್ದಾರೆ. 

ಇನ್ನು ಪತ್ರದಲ್ಲಿ ಏನಿದೆ ಅನ್ನೋದನ್ನ ನೋಡುವುದಾದರೆ. ಮೇ 16ರಿಂದ ಜುಲೈ ತಿಂಗಳವರೆಗೂ ಸಂಬಳ ದೊರೆತಿಲ್ಲ. ಇದರಿಂದ ಅತಿಥಿ ಉಪನ್ಯಾಸಕರಾರಿಗೆ ಜೀವನ ಸಾಗಿಸಲು ಕಷ್ಟವಾಗುತ್ತಿದೆ. ಹೀಗಾಗಿ ಕೂಡಲೇ ವೇತನ ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.