ಹುಬ್ಬಳ್ಳಿ: ಮಕ್ಕಳ ಭವಿಷ್ಯಕ್ಕೆ ಪೋಲಿಯೊ ಹನಿ - ಜೋಶಿ ಚಾಲನೆ!
ಹುಬ್ಬಳ್ಳಿ: ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಅಂಗವಾಗಿ, ನಗರದ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಮಗುವಿಗೆ ಪೋಲಿಯೊ ಹನಿ ಹಾಕುವುದರ ಮೂಲಕ ಚಾಲನೆ ನೀಡಿದರು. ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಹುಬ್ಬಳ್ಳಿ ತಾಲೂಕು ಆಡಳಿತ ಜಂಟಿಯಾಗಿ ಈ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಿದ್ದವು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ, ಪ್ರತಿಯೊಂದು ಮಗುವಿಗೂ ಪೋಲಿಯೊ ಲಸಿಕೆ ಅತ್ಯವಶ್ಯಕ. ಇದರಿಂದ ಮಕ್ಕಳು ಆರೋಗ್ಯದಿಂದ ಇರಲು ಸಾಧ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.