ಜೂನ್ 14ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಬೋಧನಾ ತರಗತಿಗಳು ಮುಂದೂಡಿಕೆ...!

ಜೂನ್ 14ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಬೋಧನಾ ತರಗತಿಗಳು ಮುಂದೂಡಿಕೆ...!

ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC EXAM) ಪರೀಕ್ಷೆ-2 ಜೂನ್ 14ರಿಂದ ಆರಂಭವಾಗಲಿದ್ದು ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸದ್ಯದಲ್ಲೇ ಬಿಡುಗಡೆ ಮಾಡಲಿದೆ. 

ಇದರ ನಡುವೆ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಲಾಗಿದೆ. ಮೇ 15ರಿಂದ ಜೂನ್ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29ರಿಂದ ಜೂನ್ 13ರವರೆಗೆ ನಡೆಸಲು ಆದೇಶ ನೀಡಲಾಗಿದೆ.