Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ ಬೀಳಲಿದೆ; ಹವಾಮಾನ ಇಲಾಖೆ ಎಚ್ಚರಿಕೆ..!

Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ ಬೀಳಲಿದೆ; ಹವಾಮಾನ ಇಲಾಖೆ ಎಚ್ಚರಿಕೆ..!

ಬೆಂಗಳೂರು: ಉದ್ಯಾನನಗರಿ ಸೇರಿದಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಇಂದಿನಿಂದ 2 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಎದೆ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದೆರಡು ದಿನದಿಂದ ಮೋಡ ಕವಿದ ವಾತಾವರಣವಿದೆ. ಸೂರ್ಯನ ದರ್ಶನವೇ ಅಪರೂಪವಾದಂತೆ ಆಗಿದೆ. ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಇಂದು, ನಾಳೆ ಮತ್ತು ನಾಡಿದ್ದು ಸಾಧಾರಣ ಮಟ್ಟದಲ್ಲಿ ಮಳೆಯಾಗುವು ಸೂಚನೆ ಇದೆ.

ಬೆಂಗಳೂರು ಗ್ರಾಮಾಂತರ, ಬೆಳಗಾವಿ, ವಿಜಯಪುರ, ಉಡುಪಿ, ಬಾಗಲಕೋಟೆ, ಮಂಡ್ಯ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ರಾಮನಗರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಉಡುಪಿ, ಬಾಗಲಕೋಟೆ, ಚಿಕ್ಕಬಳ್ಳಾಪುರ, ರಾಯಚೂರು, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ.