ಬೆಳಗಾವಿ : ಗಣರಾಜ್ಯೋತ್ಸವ ಪೂರ್ವಭಾವಿ ಸಭೆ - ಪೂರ್ವ ಸಿದ್ಧತೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ
ಬೆಳಗಾವಿ : ಜನವರಿ 26 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಗುವುದು. ಸಂಬಂಧಿಸಿದ ಇಲಾಖೆಗಳು ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲಾ ಇಲಾಖೆಯ ಅಧಿಕಾರಿ ಸಿಬ್ಬಂದಿ ಧ್ವಜಾರೋಹಣ ಸಮಯದಲ್ಲಿ ಕಡ್ಡಾಯವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಿರಬೇಕು ಎಂದು ತಿಳಿಸಿದರು.